ಭಾರತ, ನವೆಂಬರ್ 28 -- ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌ ಆದೇಶದ ಮೇರೆಗೆ ಸಿಎಂ ಚರ್ಚೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ.

ಇದಕ್ಕೆ ಪುಷ್ಠಿ ಎಂಬಂತೆ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಕುರಿತು ಮುಂದಿನ ಹೋರಾಟದ ರೂಪುರೇಷೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಒಕ್ಕಲಿಗರಿಗೆ ತಮ್ಮ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂರಿಸುವ ತಾಕತ್ತು ಇದೆ ಎಂದು ಹೇಳಿದ್ದರು. ಈ ಮೂಲಕ ಕಾಂಗ್ರೆಸ್‌ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಮತ್ತೊಂದು ಸುತ್ತಿನ ಚರ್ಚೆಗೆ ಡಿಕೆಶಿ ಮುನ್ನಡಿ ಬರೆದಿದ್ದಾರೆ.

ಇದಕ್ಕೆ ತಿರುಗೇಟು ಎಂಬಂತೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರು ಹೆಬ್ಬಾಳದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ...