Dakshina Kannada, ಫೆಬ್ರವರಿ 11 -- Fire at Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಸೋಮವಾರ ಮಧ್ಯರಾತ್ರಿ ಅಗ್ನಿ ಆಕಸ್ಮಿಕದಿಂದ ಸಮಸ್ಯೆ ಉಂಟಾಯಿತು. ಮನೆಯವರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಘಟನೆಯಿಂದ ಭಾರೀ ಅನಾಹುತ ಆಗಿಲ್ಲವಾದರೂ ಮನೆಗಳು ಸುಟ್ಟು ಹೋಗಿವೆ. ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿ, ಮನೆಮಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಾಂತ್ವನ ಹೇಳಿದರು.

ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ಧಾಗ ಒಂದು ಮನೆಯಲ್ಲಿ ಶಾರ್ಟ್‌ ಸರ್ಕೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಬೆಂಕಿ ಪ್ರಮಾಣ ಹೆಚ್ಚಿ ಅಕ್ಕಪಕ್ಕದ ಮನೆಗಳಿಗೂ ಹಬ್ಬಿದೆ. ಮನೆಯಲ್ಲ...