Dakshina Kannada, ಮಾರ್ಚ್ 5 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲಮೂಡ್ನೂರು ಗ್ರಾಮದ ಮಾಡತ್ತಡ್ಕದಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡು ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಈ ಸಂಬಂಧ ಎಸ್ಪಿ ಯತೀಶ್ ಸೂಚನೆಯಂತೆ ಕೋರೆಯ ಮ್ಯಾನೇಜ‌ರ್‌ನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟಕವನ್ನು ಸ್ಥಳದಲ್ಲಿ ತಂದಿಟ್ಟವರನ್ನು ಹಾಗೂ ಸ್ಫೋಟಕ ತಂದ ವಾಹನವನ್ನು ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸ್ ಎಸ್ಪಿ ಸೂಚಿಸಿದ ಮೇರೆಗೆ ಈ ಕ್ರಮ ನಡೆದಿದೆ. ಮಂಗಳವಾರ ಮಾಡತ್ತಡ್ಕದ ಕೋರೆಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಪೋಟಗೊಂಡಿದ್ದು ವಿಟ್ಲ ಪೇಟೆ ಸೇರಿ ಆಸುಪಾಸಿನ ಜನರನ್ನು ಬೆಚ್ಚಿಬೀಳಿಸಿತ್ತು. ಸುಮಾರು 4 ಕಿ.ಮೀ. ವ್ಯಾಪ್ತಿಯಲ್ಲಿ ಮನೆಗಳಿಗೆ ಹಾನಿಯಾಗಿದ್ದು ನೂರು ಮೀಟರು ದೂರದಲ್ಲಿರುವ ಎರಡು ಮನೆಗಳ ಭಾವಣೆ, ಕಿಟಕಿ ಸೇರಿ ಹಲವು ವಸ್ತುಗಳು ಜಖಂಗೊಂಡಿವೆ...