ಭಾರತ, ಫೆಬ್ರವರಿ 18 -- ನಟ ದರ್ಶನ್ ತಮ್ಮ ಅಭಿಮಾನಿಗಳನ್ನು ಪ್ರೀತಿಯ ಸೆಲೆಬ್ರಿಟಿಗಳು ಎಂದೇ ಕರೆಯುತ್ತಾರೆ. ಅದೇ ರೀತಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡ ದರ್ಶನ್ ಅಭಿಮಾನಿಗಳ ಪ್ರೀತಿ ಹಾಗೂ ಗೌರವಕ್ಕೆ ತಾನು ಚಿರಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ. ತಮ್ಮ ಕಷ್ಟಕಾಲದಲ್ಲೂ ಅಭಿಮಾನಿಗಳು ಕೈ ಬಿಟ್ಟಿಲ್ಲ ಎಂಬ ಮಾತನ್ನು ಹೇಳಿ ನಿಮ್ಮಂತಹ ಅಭಿಮಾನಿಗಳನ್ನು ಪಡೆದ ತಾನೇ ಧನ್ಯ ಎಂಬ ಭಾವನೆಯಲ್ಲಿ ಪ್ರೀತಿಯ ಸಂದೇಶ ಹಂಚಿಕೊಂಡಿದ್ದಾರೆ. ನಟ ದರ್ಶನ್ ಹಂಚಿಕೊಂಡು ಸಂದೇಶ ಹೀಗಿದೆ.

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ...