ಭಾರತ, ಫೆಬ್ರವರಿ 28 -- Delimitation Debate: ಲೋಕಸಭಾ ಕ್ಷೇತ್ರಗಳ ಕ್ಷೇತ್ರ ಮರುವಿಂಗಡಣೆ (ಕ್ಷೇತ್ರ ಪುನರ್‌ ವಿಂಗಡಣೆ) ಚರ್ಚೆ ಮತ್ತೆ ಗರಿಗೆದರಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ (ಫೆ 26) ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ "ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ' ಎಂದು ಭರವಸೆ ನೀಡಿದ್ದರು. ಅವರ ಈ ಭರವಸೆ ಬೆನ್ನಿಗೆ ದಕ್ಷಿಣ ರಾಜ್ಯಗಳ ರಾಜಕೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ಬಿಜೆಪಿ ನಾಯಕರ ಮೇಲೆ ವಿಶ್ವಾಸವಿಲ್ಲ. ಈ ಲೋಕಸಭಾ ಕ್ಷೇತ್ರಗಳ ಕ್ಷೇತ್ರ ಪುನರ್‌ ವಿಂಗಡಣೆ ಮೂಲಕ ಭಾರತದ ಮಟ್ಟದಲ್ಲಿ ದಕ್ಷಿಣ ಭಾರತದ ರಾಜಕೀಯ ಪ್ರಭಾವವನ್ನು ಕುಗ್ಗಿಸುವ ಹುನ್ನಾರ ಇದು ಎಂದು ಆರೋಪಿಸಿದರು. ಅಂದ ಹಾಗೆ, ಅಮಿತ್ ಶಾ ತಮಿಳುನಾಡಿನಲ್ಲಿ ಈ ವಿಚಾರ ಪ್ರಸ್ತಾಪಿಸುವುದಕ್ಕೂ ಒಂದು ಕಾರಣ ಇದೆ. ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಕ್ರಿಯೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನ್ಯಾಯಯುತ ಮತ್ತು ಪಾರದರ್ಶಕ ವ...