ಭಾರತ, ಮಾರ್ಚ್ 6 -- Diganth Missing Case: ಹತ್ತು ದಿನಗಳು ಕಳೆದು ಇಂದಿಗೆ ಹನ್ನೊಂದನೇ ದಿನ. ಫೆ.25ರಂದು ನಾಪತ್ತೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಸುಳಿವು ಇನ್ನೂ ಸಿಕ್ಕಿಲ್ಲ. ಈತ ಮನೆಯಿಂದ ಹೋದವನು ಎಲ್ಲಿಗೆ ಹೋದ ಎಂಬ ಕುರಿತು ಸಮೀಪದಲ್ಲಿರುವ ಸಿಸಿ ಕ್ಯಾಮರಾ ಸಹಿತ ಸಂಬಂಧಿಕರು, ಸ್ನೇಹಿತರು ಹಾಗೂ ಪರಿಚಯಸ್ಥರನ್ನೆಲ್ಲಾ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದುವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ ಶೀಘ್ರ ಪ್ರಕರಣ ಬಗೆಹರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ನಾಪತ್ತೆ ಪ್ರಕರಣದ ಬಳಿಕ ಫರಂಗಿಪೇಟೆಯಲ್ಲಿ ಪೊಲೀಸರಿಗೆ ಒತ್ತಡ ಹೇರುವ ಸಲುವಾಗಿ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಇದಾದ ಬಳಿಕ ತನಿಖೆ ಚುರುಕುಗೊಂಡಿತು. ಬಂಟ್ವಾಳದಲ್ಲಿ ಕೆಲಸ ಮಾಡಿದ್ದ ಪ್ರಮುಖ ಪೊಲೀಸ್ ಅಧಿಕಾರಿಗಳೇ ತನಿಖಾ ತಂಡದಲ್ಲಿದ್ದು, ರಾತ್ರಿ ಹಗಲೆನ್ನದೆ ತನಿಖೆ ಕೈಗೊಂಡಿದ್ದಾರೆ. ಆತನ ಮೊಬೈಲ್ ಸಂದೇಶ, ಚಾಟ್ ಹಿಸ್ಟರಿಗಳನ್ನು ಕಲೆ ಹಾಕಿ ಇದೇನಾದರೂ ಪತ್ತೆ ಕಾರ್...