Kodagu, ಮಾರ್ಚ್ 22 -- ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲು ಆಗಮಿಸಿದಾಗ ಸ್ವಾಗತ ಕೋರಲಾಯಿತು.

ತಲಕಾವೇರಿಗೆ ಭೇಟಿ ನೀಡಿ ತಲಕಾವೇರಿಯ ಬ್ರಹ್ಮಕುಂಡಿಕೆ ಬಳಿಯ ಕೊಳದಲ್ಲಿ ಡಿಕೆ ಶಿವಕುಮಾರ್‌ ಪುಣ್ಯಸ್ನಾನ ಮಾಡಿದರು

ಳಿಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಸ್ವೀಕರಿಸಿದರು, ಕುಂಕುಮಾರ್ಚನೆ ನೆರವೇರಿಸಿದರು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಜತೆಯಲ್ಲಿ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ಅವರು ಪುಣ್ಯಸ್ನಾನ ಮಾಡಿದರು.

ತಲಕಾವೇರಿಯಲ್ಲಿ ಪುಣ್ಯ ಸ್ನಾನ ಮಾಡಿ ಅಲ್ಲಿಯೇ ಕೆಲ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್‌ ಕಳೆದರು.

ಬೆಂಗಳೂರು ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ...