Bangalore, ಮಾರ್ಚ್ 12 -- Education News: ಕರ್ನಾಟಕ ರಾಜ್ಯದಲ್ಲಿ 10 ವಿದ್ಯಾರ್ಥಿಗಳಿಗಿಂತ ಕಡಿಮೆ ದಾಖಲಾತಿ ಇರುವ 4,264 ಶಾಲೆಗಳಿವೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ 2,619 ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಪೂರ್ವ ಶಿಕ್ಷಣವನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮೇ ತಿಂಗಳಲ್ಲಿ ವಿಶೇಷ ಅಭಿಯಾನ ನಡೆಲಾಗುವುದು ಎಂದೂ ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಒಟ್ಟು ಶಾಲೆಗಳ ಶೇ.20 ರಷ್ಟು ಶಾಲೆಗಳಲ್ಲಿ ದಾಖಲಾತಿ (4,264 ಶಾಲೆಗಳು) 10 ವಿದ್ಯಾರ್ಥಿಗಳಿಗಿಂತ ಕಡಿಮೆ ಇದೆ. 10 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ ಒಂದು ಪ್ರೌಢಶಾಲೆಯೂ ಇದೆ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್‌ ನ ಎನ್.‌ ಎ. ಹ್ಯಾರಿಸ್‌ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಕರ್ನಾಟಕದಲ್ಲಿ 49,679 ಸರ್ಕಾರಿ ಶಾಲೆಗಳಿವೆ. ಇದರಲ್ಲಿ 21,045 ಶಾಲೆಗಳು ಪ್ರಾಥಮಿಕ ( 1-5ನೇ ತರಗತಿ) ಮತ್ತು 1 ರಿಂದ 8ನೇ ತರಗತಿವರೆಗಿ...