Bengaluru,ಬೆಂಗಳೂರು, ಮಾರ್ಚ್ 7 -- ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ನೇಮಿಸಿದ ಡಾ. ಮಂಜುನಾಥ್‌ ಜಿ ಹೆಗಡೆ ನೇತೃತ್ವದ ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕಣೆ ಸಮಿತಿಯು ಶಾಲಾ ಪಠ್ಯದಲ್ಲಿ ಕೆಲವು ಪರಿಷ್ಕರಣೆಗಳನ್ನು ಮಾಡಿದೆ. ಇದರಂತೆ, ಜ್ಞಾನಪೀಠ ಪುರಸ್ಕೃತರಾದ ಚಂದ್ರಶೇಖರ ಕಂಬಾರ ಮತ್ತು ಗಿರೀಶ್ ಕಾರ್ನಾಡ್ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತ ದೇವನೂರು ಮಹಾದೇವ ಅವರ ಬರಹಗಳನ್ನು ಕನ್ನಡ ಭಾಷೆಯ ಪುಸ್ತಕದಲ್ಲಿ ಸೇರಿಸಲಾಗಿದೆ.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ರ ಮಾರ್ಗಸೂಚಿಗಳ ಪ್ರಕಾರ ಪರಿಷ್ಕೃತ ಕನ್ನಡ ಭಾಷಾ ಶಾಲಾ ಪಠ್ಯಪುಸ್ತಕಗಳಲ್ಲಿ ಈ ಪರಿಷ್ಕರಣೆ ಮಾಡಿರುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ (ಟಿಆರ್‌ಸಿ) ಹೇಳಿದೆ.

ಸಿದ್ದರಾಮಯ್ಯ ಅವರ ಸರ್ಕಾರ ಡಾ. ಮಂಜುನಾಥ್‌ ಜಿ ಹೆಗಡೆ ಅವರ ನೇತೃತ್ವದಲ್ಲಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ರಚಿಸಿತ್ತು. 6 ರಿಂದ 10 ನೇ ತರಗತಿಯವರೆಗಿನ ಸಮಾಜ ವಿಜ್ಞಾನ ಮತ್ತು 1ರಿಂದ 10 ರವರೆಗಿನ ಕನ್ನಡ ...