Chitradurga, ಫೆಬ್ರವರಿ 27 -- Employment Mela: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 01 ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದೆ. ಹಲವಾರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ನೀಡಲು ಸಮ್ಮತಿಸಿ ನೊಂದಣಿ ಮಾಡಿಕೊಂಡಿವೆ. ಈ ಪೈಕಿ ಕಿರ್ಲೋಸ್ಕರ್, ಎಲ್ ಅಂಡ್ ಟಿ, ನಂತಹ ಬೃಹತ್ ಕಂಪನಿಗಳು ಸೇರಿದಂತೆ ಫೈನಾನ್ಸ್, ಐಟಿ ಕಂಪನಿಗಳು, ಮೊಬೈಲ್ ಕಂಪನಿಗಳು, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮ ಕಂಪನಿಗಳು ಪ್ರಮುಖವಾಗಿವೆ. ಈ ಎಲ್ಲ ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದ್ದು, ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉ...