Kodagu, ಏಪ್ರಿಲ್ 15 -- Employment News: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025ರ ಏಪ್ರಿಲ್ 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ ರೆಸಾರ್ಟ್, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರ...