ಭಾರತ, ಮೇ 10 -- ಭಾರತ ಮತ್ತು ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆಯಾಗಿದೆ. ಆ ಮೂಲಕ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಗೆ ಸದ್ಯ ತೆರೆ ಬಿದ್ದಿದೆ. ಎರಡು ನೆರೆಯ ದೇಶಗಳು ಸಂಪೂರ್ಣ ಮತ್ತು ತಕ್ಷಣದಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ (ಮೇ 10) ಹೇಳಿದ್ದಾರೆ. ಅದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ಸರ್ಕಾರದ ಮೂಲಗಳು ಕೂಡಾ ಕದನ ವಿರಾಮವನ್ನು ದೃಢಪಡಿಸಿವೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಭಾರತೀಯ ಡಿಜಿಎಂಒಗೆ ಕರೆ ಮಾಡಿ, ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಎರಡು ದೇಶಗಳ ನಡುವೆ ಒಪ್ಪಂದ ಮಾಡಿಕೊಂಡಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ಭಾರತದ ವಿದೇಶಾಂಗ ಸಚಿವ ಎಸ್‌ ಜೈಶಂಕರ್, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಭಾರತ ಮತ್ತು ಪಾಕಿಸ್ತಾನದ ಹಿರಿಯ ಅಧಿಕಾರಿಗಳೊಂದಿಗ...