Bangalore, ಫೆಬ್ರವರಿ 23 -- ಬೆಂಗಳೂರು: ಕರ್ನಾಟಕದಲ್ಲಿ 12 ವರ್ಷಗಳ ನಂತರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ವಿಧೇಯಕದಲ್ಲಿ ತಿದ್ದುಪಡಿ ಮಾಡಲಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕದ ವಿಚಾರದಲ್ಲಿ ವಿವಾದ ಏರ್ಪಟ್ಟಿದೆ.

ಅನುದಾನ ಬಳಕೆ, ದೇಗುಲಗಳ ಆದಾಯದ ಬಳಕೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ರಾಜಕೀಯವಾಗಿ ನಡೆದಿವೆ. ಹಿಂದೂ ದೇಗುಲಗಳ ಆದಾಯವನ್ನು ಇತರೆ ಧರ್ಮಗಳಿಗೆ ಬಳಸುವ ಹುನ್ನಾರ ಅಡಗಿದೆ ಎನ್ನುವುದು ಪ್ರತಿಪಕ್ಷಗಳ ಟೀಕೆಯಾದರೆ, ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರೂ ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ಮೊದಲು ಕಾಯಿದೆ ರೂಪ ನೀಡಿದ್ದು 1997ರಲ್ಲಿ. ಆನಂತರ 2003ರಲ್ಲಿ ತಿದ್ದುಪಡಿಯೊಂದಿಗೆ ಬಳಸಲಾಯಿತು. ಇದಾದ ನಂತರ 2012ರಲ್ಲಿ ಮತ್ತೊಮ್ಮೆ ತಿದ್ದುಪಡಿ ಮಾಡಲಾಗಿತ್ತು. ಇದ...