ಭಾರತ, ನವೆಂಬರ್ 30 -- ಅಹಮದಾಬಾದ್:‌ ರಾಜಕೀಯದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಸಹಜ. ಅದರಲ್ಲೂ ಚುನಾವಣೆ ಸಮಯದಲ್ಲಿ ರಾಜಕೀಯ ನಾಯಕರ ಜಿದ್ದಾಜಿದ್ದಿ ತುಸು ಹೆಚ್ಚೇ ಎಂದು ಹೇಳಬಹುದು. ಆದರೆ ಪರಸ್ಪರರನ್ನು ದೂಷಿಸುವ ಭರದಲ್ಲಿ ನಾಲಿಗೆಯ ಮೇಲೆ ಹಿಡಿತ ಕಳೆದುಕೊಂಡರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಬಹುದು.

ಅದೇ ರೀತಿ ಗುಜರಾತ್‌ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಖಾರ್ಜುನ ಖರ್ಗೆ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ರಾವಣ' ಎಂದು ಕರೆಯುವ ಮೂಲಕ ಇಂತದ್ದೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಹೌದು, ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ರಾವಣ'ನಿಗೆ ಹೋಲಿಕೆ ಮಾಡಿದ್ದರು. ಖರ್ಗೆ ಅವರ ಹೇಳಿಕೆ ಆ ಕ್ಷಣಕ್ಕೆ ನೆರೆದ ಕಾಂಗ್ರೆಸ್‌ ಕಾರ್ಯಕರ್ತರ ಚಪ್ಪಾಳೆ ಗಿಟ್ಟಿಸಿತಾದರೂ, ಆ ಬಳಿಕ ರಾಜಕೀಯ ಅಲ್ಲೋಲಕಲ್ಲೋಲವನ...