ಭಾರತ, ಏಪ್ರಿಲ್ 15 -- FireFly movie 2025 Trailer: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಸಣ್ಣ ಪಾತ್ರವೊಂದರಲ್ಲಿ ನಟಿಸಿರುವ ಸಿನಿಮಾವೊಂದು ಈ ತಿಂಗಳು ಬಿಡುಗಡೆಯಾಗಲಿದೆ. ಹೌದು, ಶಿವಣ್ಣನ ಮಗಳು ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾದಲ್ಲಿ ಶಿವರಾಜ್‌ ಕುಮಾರ್‌ ನಟಿಸಿದ್ದಾರೆ. ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಟೀಸರ್‌ ಹಾಗೂ ಹಾಡುಗಳ ಮೂಲಕ ಈಗಾಗಲೇ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಡಾ. ರಾಜ್‌ ಕುಮಾರ್‌ ಹುಟ್ಟುಹಬ್ಬದಂದು ಅಂದರೆ ಇದೇ ತಿಂಗಳ 24ಕ್ಕೆ ಚಿತ್ರಮಂದಿರಗಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದ ಕುರಿತು ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಶಿವಣ್ಣನ ನಿವಾಸದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯ್ರಕಮ ನಡೆಸಲಾಗಿದೆ.

"ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್‌, ಡ್ಯುಯೇಟ್‌ ಸಾಂಗ್‌ ಮಾಡಬಹುದು...