Ramangar, ಜನವರಿ 28 -- Forest News: ಆನೆಗಳ ಉಪಟಳ ಇರುವ ಕರ್ನಾಟಕದ ವಿವಿಧ ಭಾಗಗಳಲ್ಲಿ ದಿನದ 24 ಗಂಟೆಯು ಆನೆ ಎಚ್ಚರಿಕೆ ಸಂದೇಶ ರವಾನೆ ಮಾಡುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕರ್ನಾಟಕ ಅರಣ್ಯ ಇಲಾಖೆ ಮುಂದಾಗಿದೆ. ಅದರಲ್ಲೂ ಬೆಂಗಳೂರಿಗೆ ಹೊಂದಿಕೊಂಡ ರಾಮನಗರ ಜಿಲ್ಲೆಯಲ್ಲಂತೂ ಕಾಡಾನೆ ಉಪಟಳ ಹೆಚ್ಚಾಗಿದೆ. ರಾಮನಗರ ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ ವಿಭಾಗ 85 ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ ಮತ್ತು ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಈ ಬಗ್ಗೆ ವಾರದ ಏಳೂದಿನ, ದಿನದ 24 ಗಂಟೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಾಸಕರಾದದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಅವರೊಂದಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಕೆಲವು ಸ...