Hassan, ಮಾರ್ಚ್ 4 -- Forest News: ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆಯು ಉಪಟಳ ನೀಡುತ್ತಿರುವ ನಾಲ್ಕು ಆನೆಗಳನ್ನು ಸೆರೆಹಿಡಿಯಲು ಮುಂದಾಗಿದೆ. ಹಂತ ಹಂತವಾಗಿ ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲುದ್ದೇಶಿಸಿರುವ ಆನೆ ಧಾಮಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ರೂಪಿಸಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲಾಗುವ ಆನೆ ಧಾಮದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುವ ನಿರೀಕ್ಷೆಯಿದೆ.
ಹಾಸನದಲ್ಲಿ ಮಿತಿ ಮೀರಿರುವ ಕಾಡಾನೆ ಉಪಟಳದಿಂದ ಜನ ಸಾಯುತ್ತಿರುವ ಜತೆಗೆ ಆನೆ ಸೆರೆಗೆ ಅರಣ್ಯ ಇಲಾಖೆ ಅನಗತ್ಯ ವಿಳಂಬ ಮಾಡುತ್ತಿದೆ ಎನ್ನುವ ಆಕ್ರೋಶ ಸಾರ್ವಜನಿಕರಲ್ಲಿ ಮಡುಗಟ್ಟಿರುವ ನಡುವೆಯೇ ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಹಾಸನ ಜಿಲ್ಲೆಗೆ ಭೇಟಿ ನೀಡಿದ...
Click here to read full article from source
To read the full article or to get the complete feed from this publication, please
Contact Us.