ಭಾರತ, ಏಪ್ರಿಲ್ 12 -- Gadag Tontadaraya Rathotsava 2025:ತೇರಿನ ಕಳಸಕ್ಕೆ ಉತ್ತತ್ತಿ-ಬಾಳೆಹಣ್ಣು ಎಸೆದು, ಮೋಜು-ಮಸ್ತಿ ಮಾಡಿ ಮನೆಗೆ ತೆರಳುವುದೇ ನಾಡಿನ ಅನೇಕ ಜಾತ್ರೆಗಳ ಧ್ಯೇಯವಾಗಿದ್ದ ಕಾಲವೊಂದಿತ್ತು. ಜಾತ್ರೆಗಳ ಹೆಸರಿನಲ್ಲಿ ಅರ್ಥಹೀನ ಆಚರಣೆಗಳ ಪಾಲನೆ, ಕುರುಡು ನಂಬಿಕೆಗಳ ಅನುಮೋದನೆ ಅವ್ಯಾಹತವಾಗಿ ಸಾಗುತ್ತಿತ್ತು. ನಾಡಿನ ಪ್ರಖ್ಯಾತ ಮಠ-ದೇವಾಲಯಗಳಿಂದ, ಗ್ರಾಮದೇವತೆಗಳ ಜಾತ್ರೆಗಳ ವರೆಗೂ ಅದೇ ಸಿದ್ಧಸೂತ್ರಗಳು ಜಾರಿಯಲ್ಲಿದ್ದವು. ಕೆಲವು ಆಚರಣೆಗಳು ತರ್ಕಬದ್ಧವಲ್ಲ ಎಂದು ಗೊತ್ತಿದ್ದರೂ ಆ ಮಠದ ಸ್ವಾಮೀಜಿಗಳಾಗಲಿ, ಭಕ್ತರಾಗಲಿ ಅವುಗಳನ್ನು ಸ್ಥಗಿತಗೊಳಿಸುವ ಸಾಹಸಕ್ಕೆ ಮುಂದಾಗಿರಲಿಲ್ಲ. ಇದೆಲ್ಲದಕ್ಕೆ ಅಪವಾದ ಎಂಬಂತೆ ಗದುಗಿನ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ತಾವು ಪೀಠವನ್ನೇರಿದ ಕೆಲವೇ ವರ್ಷಗಳಲ್ಲಿ ತೋಂಟದಾರ್ಯ ಜಾತ್ರೆಯಿಂದ ಒಂದೊಂದೆ ಅರ್ಥಹೀನ ಆಚರಣೆಗಳನ್ನು ನೇಪಥ್ಯಕ್ಕೆ ಸರಿಸಿದರು. ಆ ಜಾಗೆಯಲ್ಲಿ ಜನರಿಗೆ ಒಳಿತಾಗುವಂಥ ಅಪೂರ್ವ ಆಚರಣೆಗಳನ್ನು ಅಳವಡಿಸುತ್ತಾ ಸಾಗಿದ್ದು ಇತಿಹಾಸ.

ಶರಣ ಲಿಂ...