Bengaluru, ಜನವರಿ 30 -- Prajwal Devaraj Gana Movie: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್‌ ದೇವರಾಜ್‌ ನಾಯಕ ನಟನಾಗಿ ನಟಿಸಿರುವ, ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯ ಗಣ ಸಿನಿಮಾ ಇದೀಗ ಕೊನೆಗೂ ಬಿಡುಗಡೆ ಆಗುತ್ತಿದೆ. ಬಿಡುಗಡೆ ಮುಂದೂಡುತ್ತಲೇ ಬಂದಿದ್ದ ಈ ಸಿನಿಮಾ, ಇದೇ ವಾರ (ಜನವರಿ 31) ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾವನ್ನು ಹೈದರಾಬಾದ್ ಮೂಲದ ಪಾರ್ಥು ಎಂಬುವವರು ತಮ್ಮ ಚೆರಿ ಕ್ರಿಯೇಷನ್ಸ್ ಬ್ಯಾನರ್‌ ಮೂಲಕ ನಿರ್ಮಾಣ ಮಾಡಿದ್ದಾರೆ. ಇದು ಇವರ ಮೊದಲ ಕನ್ನಡ ಸಿನಿಮಾ. ಇವರಷ್ಟೇ ಅಲ್ಲ, ಗಣ ಸಿನಿಮಾದ ನಿರ್ದೇಶಕರೂ ಕೂಡ ತೆಲುಗು ಮೂಲದವರೇ. ಇತ್ತೀಚೆಗಷ್ಟೇ ಟಾಲಿವುಡ್‌ನಲ್ಲಿ ಹಿಟ್‌ ಆದ ಪುಷ್ಪ 2 ಸಿನಿಮಾ ನಿರ್ದೇಶಕ ಸುಕುಮಾರ್‌ ಅವರ ಜತೆಗೆ ಕೆಲಸ ಮಾಡಿದ ಅನುಭವ ಇರುವ ಹರಿಪ್ರಸಾದ್‌ ಜಕ್ಕ, ಗಣ ಚಿತ್ರದ ಮೂಲಕ ಚಂದನವನಕ್ಕೆ ಬಂದಿದ್ದಾರೆ.

ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ಪಾರ್ಥು, "ನಾನು ತೆಲುಗು ಮೂಲದವನು, ಗಣ ನನ್ನ ಮೊದಲ ಸಿನಿಮಾ. ಈ ಸಿನಿಮಾ ಕೈ ಹಿಡಿದರೆ, ಇನ್ನೂ ಒಂದಷ್ಟು ಕನ್ನಡ ಸಿನಿಮಾಗಳನ್ನು ...