Bengaluru, ಮಾರ್ಚ್ 7 -- ಹೆಣ್ಣು ಮಕ್ಕಳು ಪ್ರೌಢಾವಸ್ಥೆಗೆ ತಲುಪುವ ಮುನ್ನ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವ, ಧೈರ್ಯ ನೀಡುವ, ಯಾವುದು ಸರಿ ಯಾವುದು ತಪ್ಪು ಯಾವುದನ್ನು ಅನುಕರಿಸಬೇಕು ಯಾವುದನ್ನು ಅನುಕರಿಸಬಾರದು ಎನ್ನುವಂತಹ ಹಲವು ವಿಷಯಗಳನ್ನು ಪೋಷಕರಾದವರು ಅರಿವು ಮೂಡಿಸುವುದು ಬಹಳ ಮುಖ್ಯ. ಅವರು ಬೆಳೆದಂತೆ ಆತ್ಮವಿಶ್ವಾಸದಿಂದ ಮುನ್ನಡೆಯುವುದಕ್ಕೆ ಸಹಾಯ ಮಾಡಲು ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಅದಕ್ಕೆ ಪೂರಕವಾದ ಅವಕಾಶಗಳನ್ನು ಒದಗಿಸುವಲ್ಲಿ ಪೋಷಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಹಾಗಾದರೆ ಹೆಣ್ಣುಮಕ್ಕಳು ಪ್ರೌಢಾವಸ್ಥೆಯನ್ನು ತಲುಪುವ ಮೊದಲು ನೀವು ಯಾವೆಲ್ಲಾ ವಿಷಯದ ಬಗ್ಗೆ ಅವರಿಗೆ ಅರಿವು ಮೂಡಿಸಬೇಕು? ಸರಿಯಾದ ದಾರಿಯಲ್ಲಿ ಸಾಗುವಂತೆ ಹೇಗೆ ಮಾರ್ಗದರ್ಶನ ನೀಡಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಫಲಿತಾಂಶಗಳಿಗಿಂತ ಪ್ರಯತ್ನವನ್ನು ಶ್ಲಾಘಿಸಿ. ಮಾತನಾಡಲು ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವರನ್ನು ಪ್ರೋತ್ಸಾಹಿಸಿ. ಅವರು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲಿ ಮತ್ತು ಸಮಸ್ಯ...