ಭಾರತ, ಫೆಬ್ರವರಿ 6 -- Greater Bengaluru Bill: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ- 2024ರ ಪ್ರಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಡಿ ಇರಿಸಿದೆ. ಇದಕ್ಕೆ ಸಂಬಂಧಿಸಿ ಬೆಂಗಳೂರಿಗರಿಂದ ಸಲಹೆ ಸೂಚನೆ ಸ್ವೀಕರಿಸುವ ಪ್ರಕ್ರಿಯೆಯನ್ನು ಫೆ 10 ರಿಂದ 12 ರ ತನಕ ಮೂರು ದಿನಗಳ ಕಾಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲ 8 ವಲಯಗಳ 5 ಸ್ಥಳಗಳಲ್ಲಿ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಐದು ಸ್ಥಳಗಳಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಸಮಿತಿಯ ಅಧ್ಯಕ್ಷರು.

ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿ, ಸಹಭಾಗಿತ್ವ ಮತ್ತು ಸ್ಪಂದನಶೀಲ...