Bangalore, ಫೆಬ್ರವರಿ 21 -- ಬೆಳಗಾವಿ: ಮೂರು ತಿಂಗಳಿನಿಂದ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಮಹಿಳೆಯರು ಕಾಯುತ್ತಲೇ ಇದ್ದಾರೆ. ಮೂರು ತಿಂಗಳದ್ದೂ ಸೇರಿ ಬಾಕಿ ಹಣವನ್ನು ಸದ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರಾದಿಯಾಗಿ ಹಲವರು ಹೇಳಿದ್ದಾರೆ. ಬೇಗನೇ ಹಣ ಬಿಡುಗಡೆ ಮಾಡಿ ಎಂದು ಕರ್ನಾಟಕದ ನಾನಾ ಭಾಗದ ಮಹಿಳೆಯರು ಕೇಳಿಕೊಂಡಿದ್ದಾರೆ. ಶುಕ್ರವಾರ ಹಣ ಬಿಡುಗಡೆಯಾಗಬಹುದು ಎನ್ನುವ ನಿರೀಕ್ಷೆಯೂ ಇತ್ತು. ಆದರೆ ಇದು ಇನ್ನೂ ಒಂದು ವಾರ ವಿಳಂಬವಾಗಬಹುದು. ಇದನ್ನು ಖುದ್ದು ಗೃಹಲಕ್ಷ್ಮಿ ಯೋಜನೆಯ ಉಸ್ತುವಾರಿ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ...