ಭಾರತ, ನವೆಂಬರ್ 27 -- ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅರೆಸೇನಾ ಪಡೆ ಯೋಧನೋರ್ವ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ಧಾನೆ.

ಗುಜರಾತ್‌ನ ಪೋರಬಂದರ್ ಬಳಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಣಿಪುರದ ಇಂಡಿಯನ್ ರಿಸರ್ವ್ ಬೆಟಾಲಿಯನ್ (IRB) ಯೋಧನೋರ್ವ, ಎಕೆ-47 ನಿಂದ ತನ್ನ ಸಹೋದ್ಯೋಗಿಗಳತ್ತ ಮನಬಂದಂತೆ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀಋವಾಗಿ ಗಾಯಗೊಂಡಿದ್ದಾರೆ.

ನಿನ್ನೆ(ನ.26-ಶನಿವಾರ) ಸಂಜೆ ಕ್ಷುಲ್ಲಕ ವಿಷಯಕ್ಕೆ ಅರೆಸೇನಾ ಪಡೆಯ ಯೋಧರ ನಡುವೆ ಜಗಳವಾಗಿದೆ. ಸಿಟ್ಟಿನ ಭರದಲ್ಲಿ ಕಾನ್‌ಸ್ಟೇಬಲ್‌ ಎಸ್.‌ ಇನೌಚಾಸಿಂಗ್‌ ಎಂಬಾತ ತನ್ನ ಎಕೆ -47 ರೈಫಲ್‌ನಿಂದ, ಸಹೋದ್ಯೋಗಿಗಳತ್ತ ಮನಸೋಇಚ್ಛೆ ಗುಂಡು ಹಾರಿಸಿದ್ದಾನೆ. ದುರ್ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದ...