ಭಾರತ, ಫೆಬ್ರವರಿ 18 -- ನವದೆಹಲಿ : ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ ಪ್ರಕಟಿಸಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರು, 65 ವರ್ಷ ವಯಸ್ಸಿನ ನಂತರ ಮಂಗಳವಾರ (ಫೆ.19) ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಹೀಗಾಗಿ, ಪ್ರಧಾನಿ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಸಭೆ ಸೇರಿ, ಜ್ಞಾನೇಶ್‌ ಕುಮಾರ್‌ ಅವರನ್ನು ಸಿಇಸಿ ಆಗಿ ಆಯ್ಕೆ ಮಾಡಿದೆ. 26ನೇ ಚೀಫ್‌ ಇಲೆಕ್ಷನ್‌ ಕಮಿಷನರ್‌ ಆಗಿ ಇವರ ನೇಮಕವನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ.

ಮುಖ್ಯ ಚುನಾವಣಾ ಆಯುಕ್ತರ ಅಧಿಕಾರಾವಧಿ ಆರು ವರ್ಷ, ಅಥವಾ ಅವರು 65 ವರ್ಷ ತುಂಬುವವರೆಗೆ ಅಧಿಕಾರದಲ್ಲಿರುತ್ತಾರೆ. ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಎಂಬ ಹೆಗ್ಗಳಿಕೆಗೆ ಕುಮಾರ್ ಪಾತ್ರರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ಪ...