Belur, ಮಾರ್ಚ್ 17 -- ಹಾಸನ : ಹಾಸನ ಜಿಲ್ಲೆಯ ಬೇಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಜನರಿಗೆ ತೊಂದರೆ ಕೊಡುತ್ತಿರುವ ಕಾಡಾನೆಗಳ ಸೆರೆಗೆ ಕರ್ನಾಟಕ ಅರಣ್ಯ ಇಲಾಖೆ ಅನುಮತಿ ನೀಡಿದ ಬೆನ್ನಲ್ಲೇ ಆನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದ್ದು, ಒಂಟಿ ಸಲಗವೊಂದನ್ನು ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನಲ್ಲಿಯೇ ಎರಡು ತಿಂಗಳ ಅಂತರದಲ್ಲೇ ನಾಲ್ವರು ಆನೆ ದಾಳಿಯಿಂದ ಜೀವ ಕಳೆದುಕೊಂಡಿದ್ದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಅರಣ್ಯ ಇಲಾಖೆಯ ಹಾಸನ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ ಭಾನುವಾರದಿಂದಲೇ ಕಾರ್ಯಾಚರಣೆ ನಡೆಸಿಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಹಳ್ಳಿಗದ್ದೆ ಶಾಂತಿ ಎಸ್ಟೇಟ್​​ನಲ್ಲಿದ್ದ ಒಂಟಿಸಲಗವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಪುಂಡಾನೆ ಸೆರೆ ಸಿಕ್ಕಿದೆ.

ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಉಪಟಳ ನೀಡುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯುವಂತೆ ಸೂಚಿಸಿದ್ದರ...