Bangalore, ಏಪ್ರಿಲ್ 30 -- ಬೆಂಗಳೂರು:ಲೈಂಗಿಕ ಪ್ರಕರಣಗಳಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ದಾಖಲಾಗಿರುವ ಮೊಕದ್ದಮೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಮೂರು ದಿನಗಳ ಒಳಗೆ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ( NWC) ಕಟ್ಟುನಿಟ್ಟಿನ ಸೂಚನೆಯನ್ನು ಕರ್ನಾಟಕಕ್ಕೆ ನೀಡಿದೆ. ಈ ಕುರಿತಾಗಿ ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಪತ್ರ ಬರೆದಿರುವ ಆಯೋಗವು, ಪ್ರಕರಣದ ಸಂಪೂರ್ಣ ಮಾಹಿತಿ ಒಳಗೊಂಡ ವರದಿಯನ್ನು ಸಲ್ಲಿಸಬೇಕು. ಇದರಲ್ಲಿ ದಾಖಲಾಗಿರುವ ಪ್ರಕರಣ, ಸ್ಥಿತಿಗತಿ, ಪೊಲೀಸ್‌ ಇಲಾಖೆ ಕೈಗೊಂಡ ಕ್ರಮಗಳು ಸೇರಿದಂತೆ ಎಲ್ಲಾ ಅಂಶಗಳನ್ನು ಉಲ್ಲೇಖಿಸಬೇಕು ಎಂದು ಸೂಚಿಸಲಾಗಿದೆ.

ಇಡೀ ಘಟನೆ ಖಂಡನೀಯ. ಇದನ್ನು ಯಾರೂ ಒಪ್ಪಲು ಸಾಧ್ಯವೂ ಇಲ್ಲ. ಮಹಿಳಾ ಆಯೋಗವು ಇಂತಹ ಕೃತ್ಯಗಳನ್ನು ಬಲವಾಗಿ ಖಂಡಿಸಲಿದೆ. ಪೊಲೀಸ್‌ ಕ್ರಮಗಳ ಕುರಿತು ವರದಿ ನೀಡಿದರೆ ಆಯೋಗವು ತನ್ನ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿರಿ: Hassan Sex Scandal: ಪ್ರಜ್ವಲ್‌...