ಭಾರತ, ಮಾರ್ಚ್ 5 -- Health Care: ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ನ್ಯಾಯಯುತವಾಗಿ ಸಿಗಬೇಕಾದ ಆರೋಗ್ಯ ಸೇವೆ ಎಲ್ಲರಿಗೂ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಇದಕ್ಕೆ ಸಂಬಂಧಿಸಿ ಸ್ಪಷ್ಟ ನೀತಿ ರೂಪಿಸಬೇಕು ಎಂದು ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ದಾಖಲಾಗುವ ರೋಗಿಗಳು ಹಾಗೂ ಅವರ ಆರೈಕೆಗೆ ಜತೆಯಲ್ಲಿರುವವರು ಸುಲಿಗೆಗೆ ಗುರಿಯಾಗುತ್ತಿದ್ದಾರೆ. ಇದನ್ನು ತಡೆಯಲು ಸೂಕ್ತ ನೀತಿ ರೂಪಿಸುವ ಹೊಣೆಗಾರಿಕೆ ರಾಜ್ಯ ಸರ್ಕಾರಗಳದ್ದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 4) ಹೇಳಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವವರು ಔಷಧ ಮಳಿಗೆಗಳಲ್ಲಿ ಹೆಚ್ಚಿನ ಬೆಲೆಗೆ ಔಷಧ ಮತ್ತು ವೈದ್ಯಕೀಯ ಉಪಕರಣ ಖರೀದಿಸಬೇಕಾದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಈ ನಿರ್ದೇಶನ ನೀಡಿದೆ.

ನ...