Bengaluru, ಜನವರಿ 31 -- ಯುವಜನತೆ ಹಠಾತ್ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡುಬಂದಿರುವುದು ಆಧುನಿಕ ಜೀವನಶೈಲಿಯ ಕೊಡುಗೆ ಎಂದೇ ಹೇಳಬಹುದು. ನಮ್ಮ ದಿನನಿತ್ಯದ ಚಟುವಟಿಕೆ, ಆಹಾರ ಸಹಿತ ಹಲವು ಅಂಶಗಳು ಹೃದಯದ ಮೇಲೆ ಅಧಿಕ ಒತ್ತಡ ಮತ್ತು ಪ್ರಭಾವ ಬೀರಿದ್ದರಿಂದ ಹೃದಯಾಘಾತಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎನ್ನುವುದು ವೈದ್ಯರ ಹೇಳಿಕೆ. ಅದರಲ್ಲೂ 20ರಿಂದ 40 ವರ್ಷದೊಳಗಿನವರಲ್ಲೇ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಜಕ್ಕೂ ಆತಂಕಕಾರಿಯಾಗಿದೆ.

ಯುವಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಯ ಹೃದ್ರೋಗ ತಜ್ಞರಾದ ಡಾ. ಮನಿಷ್ ಹಿಂದುಜಾ ಅವರು ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಿರುವವರ ಸಂಖ...