Bangalore, ಫೆಬ್ರವರಿ 7 -- Heart Attack: ಕೋವಿಡ್‌ ನಂತರ ಕರ್ನಾಟಕದಲ್ಲಿ ಎಲ್ಲಾ ವಯೋಮಾನದವರು ಹಠಾತ್‌ ಹೃದಯಾಘಾತಕ್ಕೆ ಸಿಲುಕಿ ಜೀವ ಕಳೆದುಕೊಳ್ಳುತ್ತಿರುವ ಕುರಿತು ಗಂಭೀರ ಸಲಹೆಗಳು ಕೇಳಿ ಬಂದ ಬೆನ್ನಲ್ಲೆ ಕರ್ನಾಟಕ ಸರ್ಕಾರವೂ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ. ಹಿರಿಯ ಪತ್ರಕರ್ತ ಹಾಗೂ ಚಿಂತಕ ರಾಜಾರಾಂ ತಲ್ಲೂರು ಅವರ ಬರೆದಿದ್ದ ಪತ್ರವನ್ನಾಧರಿಸಿ ಸಿಎಂ ಸಿದ್ದರಾಮಯ್ಯ ಅವರು ಸಮಿತಿ ರಚನೆಗೆ ಸೂಚಿಸಿದ್ದಾರೆ.ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ದಿನದಿಂದ ದಿನಕ್ಕೆ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ತಮ್ಮ ಇ- ಮೇಲ್ ಮೂಲಕ ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯ ಸ್ತಂಭನ, ಮೆದುಳು, ನರ ಸಂಬಂಧಿ ಕಾರಣಗಳಿಂದ ಯು...