Bengaluru, ಮೇ 16 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th May 2024 Daily Horoscope).

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಅಷ್ಠಮಿ ಬೆಳಗ್ಗೆ 07.00 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್...