ಭಾರತ, ಮಾರ್ಚ್ 28 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th March 2024 Horoscope).

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಗುರುವಾರ,

ತಿಥಿ: ತದಿಗೆ ಬೆಳಿಗ್ಗೆ 4.11 ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ: ಸ್ವಾತಿ ನಕ...