ಭಾರತ, ಮಾರ್ಚ್ 29 -- Hostel Helpline: ಮಂಡ್ಯ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸಹಾಯವಾಣಿ ಆರಂಭಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಅದೂ ಮಂಡ್ಯ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಅನಾವರಣಗೊಳಿಸಲಾಗುವುದು. ವಿದ್ಯಾರ್ಥಿಗಳು ಯಾವುದಾದರೂ ವ್ಯವಸ್ಥೆಯಲ್ಲಿ ತೊಂದರೆಯಿದ್ದಲ್ಲಿ ಕರೆ ಮಾಡಬಹುದು. ಇದರಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸುಲಭವಾಗಲಿದೆ. ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡುವ ವಿದ್ಯಾರ್ಥಿಗಳ ಹೆಸರನ್ನು ಗೌಪ್ಯವಾಗಿಟ್ಟು ಸಮಸ್ಯೆಗಳನ್ನ ಬಗೆಹರಿಸುವುದು ಸಹಾಯವಾಣಿ ರೂಪಿಸುವ ಮುಖ್ಯ ಉದ್ದೇಶ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಹೇಳುತ್ತಾರೆ.

ಮಂಡ್ಯ ಜಿಲ್ಲೆಯ ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ಸೌಲಭ್ಯ ಚೆನ್ನಾಗಿಲ್ಲ. ಊಟವೂ ರುಚಿಕರವಾಗಿಲ್ಲ. ಸಿಬ್ಬಂದಿ ಸಹಕಾರವೂ ಕಡಿಮೆ ಎನ್ನ...