Bengaluru, ಮೇ 6 -- ಸುದೀಪ್ ಅಭಿನಯದ ʻಮ್ಯಾಕ್ಸ್ʼ ಚಿತ್ರದ ಮುಂದುವರೆದ ಭಾಗ ಬರುವ ಸಾಧ್ಯತೆ ಇದೆ ಎಂಬ ಮಾತು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ʻಮ್ಯಾಕ್ಸ್ 2ʼ ಬರುವುದು ನಿಜವಷ್ಟೇ ಅಲ್ಲ, ಅದು 'ಬಿಲ್ಲ ರಂಗ ಬಾಷ' ಚಿತ್ರಕ್ಕೂ ಮೊದಲೇ ಬಿಡುಗಡೆಯಾಗಲಿದೆ. ಹೌದು, ʻಮ್ಯಾಕ್ಸ್ 2ʼ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಈ ಚಿತ್ರವನ್ನು ಮೊದಲ ಭಾಗ ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಅವರೇ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ.
ʻಮ್ಯಾಕ್ಸ್ 2ʼ ಚಿತ್ರದಲ್ಲಿ ಸುದೀಪ್ ತಮ್ಮ ಅರ್ಜುನ್ ಮಹಾಕ್ಷಯ್ ಪಾತ್ರವನ್ನು ಮುಂದುವರೆಸಲಿದ್ದಾರೆ. ಮೊದಲ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್. ಧನು ಮತ್ತು ಸುದೀಪ್ ಜೊತೆಯಾಗಿ ನಿರ್ಮಾಣ ಮಾಡಿದ್ದರು. ʻಮ್ಯಾಕ್ಸ್ 2ʼ ಚಿತ್ರವನ್ನು ಯಾರು ನಿರ್ಮಾಣ ಮಾಡಲಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಮುಂದಿನ ಒಂದೆರಡು ದಿನಗಳಲ್ಲಿ ತೀರ್ಮಾನವಾಗಲಿದ್ದು, ಆ ನಂತರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಇದನ್ನೂ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.