ಭಾರತ, ಏಪ್ರಿಲ್ 14 -- ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶದೆಲ್ಲೆಡೆ ಸದ್ದು ಮಾಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಈ ಘಟನೆ ಸಂಬಂಧ ಹುಬ್ಬಳ್ಳಿ ಮಂದಿ ರೊಚ್ಚಿಗೆದ್ದಿದ್ದರು. ಈ ಕೂಡಲೇ ಆರೋಪಿಯನ್ನು ಬಂಧಿಸುವಂತೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಹುಬ್ಬಳ್ಳಿ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಕಂಡುಹುಡುಕಿದ್ದರು. ಬಂಧನದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆತ ಈಗ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಅತ್ಯಾಚಾರ ಆರೋಪಿಯ ಎನ್‌ಕೌಂಟರ್ ಮಾಡಿರುವ ಪಿಎಸ್‌ಐ ಅನ್ನಪೂರ್ಣರನ್ನು ಲೇಡಿ ಸಿಂಗಂ ಎಂದು ಕರೆಯುವ ಜೊತೆಗೆ ಆಕೆಯ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೀವು ತಿಳಿಯಬೇಕಾದ 10 ಅಂಶಗಳು ಇಲ್ಲಿವೆ.

ಇದನ್ನೂ ಓದಿ: ಹುಬ್ಬಳ್ಳಿಯ 5 ವರ...