ಭಾರತ, ಮಾರ್ಚ್ 1 -- Hubli News: ಹುಬ್ಬಳ್ಳಿ ಮಹಾನಗರದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ ಹೌಸ್‌ನಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ .26 ವರ್ಷದ ಸುಭಾಷ್ ಮೋಹನ್ ರಾಮ್ ಮೃತ ದುರ್ದೈವಿ. ರಾಜಸ್ಥಾನದ ಜೋಧ್ ಪುರ ಮೂಲದವರು. ಅಡುಗೆ ಅನಿಲ ಸೋರಿಕೆಯಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಸುಭಾಷ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಭಾಷ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ತಮ್ಮ ಊರಿಗೆ ವಾಪಸ್ ಆಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಮೋಹನ್‌ರಾಮ್‌ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಶನಿವಾರ ಕೊನೆಯುಸಿರೆಳೆದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಹುಬ್ಬಳ್ಳಿ ಹೊರ ವಲಯದ ಪ್ರದೇಶದಲ್ಲಿರುವ ಕೈಗಾರಿಕಾ ವಲಯದ ಫಾರ್ಮ್‌ ಹೌಸ್‌ ಒಂದರಲ್ಲಿ ...