Mandya, ಜನವರಿ 31 -- ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್‌ ಅಧಿಕಾರಿಯನ್ನು ವರ್ಗ ಮಾಡಿದ್ದು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್.ನಂದಿನಿ ಅವರನ್ನು ನೇಮಕ ಮಾಡಿದೆ. ಮಂಡ್ಯ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶೇಖ್‌ ತನ್ವೀರ್‌ ಆಸಿಫ್‌ ಅವರು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿತ್ತು. ಈ ಕಾರಣದಿಂದಾಗಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ಖಾಲಿ ಇತ್ತು. ಮಂಡ್ಯ ಜಿಲ್ಲಾಧಿಕಾರಿಯಾಗಿರುವ ಡಾ.ಕುಮಾರ ಅವರಿಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿತ್ತು. ಈಗ ಪೂರ್ಣ ಪ್ರಮಾಣದಲ್ಲಿಯೇ ಅಧಿಕಾರಿ ನಿಯೋಜಿಸಲಾಗಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದ ಶಿಕ್ಷಕ ದಂಪತಿಯ ಪುತ್ರಿಯಾದ ನಂದಿನಿ ಅವರು ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಬಳಿಕ ಬೆಂಗಳೂರಿನ ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಟೆಕ್ನಾಲಜಿಯಲ...