Bangalore, ಫೆಬ್ರವರಿ 21 -- IAS Posting: ಕರ್ನಾಟಕದಲ್ಲಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಮೈಸೂರು, ಹಾವೇರಿ. ಬಳ್ಳಾರಿ ಜಿಲ್ಲಾಪಂಚಾಯಿತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ. ಅಲ್ಲದೇ ಕೆಲವು ಇಲಾಖೆಗಳಿಗೆ ಯುವ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹುದ್ದೆ ನಿರೀಕ್ಷೆಯಲ್ಲಿ ಮೂವರು ಐಎಎಸ್‌ ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಲಾಗಿದೆ. ಎರಡು ವಾರದ ಹಿಂದೆ ಹತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ಸರ್ಕಾರ ವರ್ಗ ಮಾಡಿ ಆದೇಶ ಹೊರಡಿಸಿತ್ತು. ಇದಾದ ನಂತರ ಕಳೆದ ವಾರ ಸರ್ಕಾರ ಮಂಡ್ಯ ಜಿಲ್ಲಾಪಂಚಾಯಿತಿ ಸಿಇಒ ಅವರನ್ನು ನೇಮಕ ಮಾಡಲಾಗಿತ್ತು. ಈಗ ಹಣಕಾಸು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಐಟಿ ಬಿಟಿ, ವಾಣಿಜ್ಯ ತೆರಿಗೆ ಇಲಾಖೆಗಳ ಪ್ರಮುಖ ಹುದ್ದೆಯಲ್ಲಿದ್ದ ಐಎಎಸ್‌ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ.

ಏಳು ತಿಂಗಳ ಹಿಂದೆಯಷ್ಟೇ ಬೀದರ್‌ನಿಂದ ಗದಗ ಡಿಸಿಯಾಗಿ ನಿಯೋಜನೆಗೊಂಡು ಅಲ್ಲಿಂದಲೂ ವರ್ಗಾವಣೆಯಾಗಿ ಸ್ಥಳ ನಿರೀಕ್ಷಣೆಯಲ್ಲಿದ್ದ ಸಿ.ಎಂ. ಗೋವಿಂದ ರೆಡ್ಡಿ ಅವರನ್ನು ಕರ್ನಾಟಕ ...