Bangalore, ಮಾರ್ಚ್ 26 -- ಬೆಂಗಳೂರು: ಕರ್ನಾಟಕ ಸರ್ಕಾರವು ಹಿರಿಯ ಐಎಎಸ್‌ ಅಧಿಕಾರಿ ರಶ್ಮಿ ಮಹೇಶ್‌ ಸಹಿತ ಕೆಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈವರೆಗೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಶ್ಮಿ ಮಹೇಶ್‌ ಅವರನ್ನು ಪ್ರಾಥಮಿಕ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದರೊಟ್ಟಿಗೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಕಾರ್ಯಭಾರವನ್ನು ರಶ್ಮಿ ಮಹೇಶ್‌ ಅವರಿಗೆ ನೀಡಲಾಗಿದೆ. ಈವರೆಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಿತೇಶ್‌ಕುಮಾರ್‌ ಸಿಂಗ್‌ ಅವರನ್ನು ಕರ್ನಾಟಕ ಸರ್ಕಾರವು ಎರಡು ತಿಂಗಳ ಹಿಂದೆಯೇ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದರಿಂದ ಹುದ್ದೆ ಖಾಲಿ ಇತ್ತು.

ಅದೇ ರೀತಿ ಕರ್ನಾಟಕ ಏಡ್ಸ್‌ ಪ್ರಿವೆನ್ಶನ್‌ ಸೊಸೈಟಿ ಯೋಜನಾ ನಿರ್ದೇಶಕರಾಗಿದ್ದ ಎನ್‌.ಎಂ.ನಾಗರಾಜ ಅವರನ್ನು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದ...