Delhi, ಮಾರ್ಚ್ 2 -- IDBI Bank Recruitment 2025: ಭಾರತದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಸ್ಟ್ರಿಯಲ್‌ ಬ್ಯಾಂಕ್‌ ಆಫ್‌ ಇಂಡಿಯಾ(ಐಡಿಬಿಐ)ವು 650 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಮಾರ್ಚ್‌ 1 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಮಾಸಿಕ 50 ರಿಂದ 55 ಸಾವಿರ ರೂ. ವರೆಗೂ ಆರಂಭಿಕ ವೇತನ ಇರಲಿದೆ. ಏಪ್ರಿಲ್‌ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬೈಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ. ಐಡಿಬಿಐ ಬ್ಯಾಂಕ್ 650 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ 2025 ರ ಮಾರ್ಚ್ 12, ರವರೆಗೆ ಅರ್ಜಿ ಸಲ್ಲಿಸಲಲು ಅವಕಾಶವಿದೆ. ಪದವಿ ಪಡೆದವರು ಮತ್ತು 20-25 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು ಎ...