Bangalore, ಜೂನ್ 4 -- ಬೆಂಗಳೂರು: ಕರ್ನಾಟಕ ಕೇಡರ್‌ನ ಹಿರಿಯ ಐಎಫ್‌ಎಸ್‌ ಅಧಿಕಾರಿ, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.‌ ಗೋಕುಲ್‌ ಅವರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಎಚ್‌ಎಂಟಿ ಅರಣ್ಯ ಭೂಮಿ ಪರಾಭಾರೆ ವಿಚಾರದಲ್ಲಿ ಸರ್ಕಾರದ ಅನುಮತಿ ಪಡೆಯದೇ ಕಾನೂನು ಕ್ರಮ ಕೈಗೊಂಡಿದ್ದೂ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಆರ್.ಗೋಕುಲ್‌ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಮಾನತು ಆದೇಶ ಹೊರಡಿಸಿದೆ. ವಿಚಾರಣೆಯನ್ನು ಬಾಕಿ ಇರಿಸಿ ಆರ್.ಗೋಕುಲ್‌ ಅವರನ್ನು ಅಮಾನತಿನಲ್ಲಿ ಇರಿಸಲಾಗಿದೆ ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಪ್ರಸನ್ನಕುಮಾರ್‌ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಹಿಂದಿನ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್‌ ದವೆ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯಕುಮಾರ್‌ ಗೋಗಿ, ಹಾಲಿ ಎಪಿಸಿಸಿಎಫ್‌ ಆಗಿರುವ ಸ್ಮಿತಾ ಬಿಜ್ಜೂರ್‌ ಹಾಗೂ ಗೋಕುಲ್‌ ಅವರಿಗೆ ನೊಟೀಸ್‌ ನೀಡಲಾಗಿತ್ತು. ಇದರಲ್ಲಿ ಗೋಕುಲ್‌ ಅ...