Bangalore, ಮಾರ್ಚ್ 21 -- IFS Posting: ಕರ್ನಾಟಕ ಅರಣ್ಯ ಇಲಾಖೆಯ ಹಿರಿಯ ಐಎಫ್‌ಎಸ್‌ ಅಧಿಕಾರಿ ಕುಮಾರಪುಷ್ಕರ್‌ ಅವರನ್ನು ವರ್ಗ ಮಾಡಲಾಗಿದೆ. ಸುಮಾರು ನಾಲ್ಕು ವರ್ಷದಿಂದ ಅರಣ್ಯ ಇಲಾಖೆಯ ಪ್ರಮುಖ ಹುದ್ದೆಯಾದ ವನ್ಯಜೀವಿ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕುಮಾರಪುಷ್ಕರ್‌ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಅರಣ್ಯ ಇಲಾಖೆಯ ಆಡಳಿತ ಮತ್ತು ಸಮನ್ವಯ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಆಡಳಿತ ಮತ್ತು ಸಮನ್ವಯ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಾರದ ಹಿಂದೆಯಷ್ಟೇ ನೇಮಕಗೊಂಡಿದ್ದ ಮತ್ತೊಬ್ಬ ಹಿರಿಯ ಐಎಫ್‌ ಎಸ್‌ ಅಧಿಕಾರಿ ಶ್ರೀನಿವಾಸುಲು ಅವರನ್ನು ವನ್ಯಜೀವಿ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇಬ್ಬರ ವರ್ಗಾವಣೆಯ ಕುರಿತು ಕರ್ನಾಟಕ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯು ಆದೇಶವನ್ನು ಜಾರಿ ಮಾಡಿದೆ.

2021ರ ಅಕ್ಟೋಬರ್‌ನಲ್ಲಿ ವನ್ಯಜೀವಿ ವಿಭಾಗದ ಅಪ...