Haveri, ಏಪ್ರಿಲ್ 11 -- Indian Railways: ಬೆಂಗಳೂರು ಹಾಗೂ ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ತುಮಕೂರು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಿದ ಬಳಿಕ ಈಗ ಕನಕದಾಸರ ನಾಡು, ಸಂತ ಶಿಶುನಾಳ ಷರೀಫರ ಬೀಡು, ಯಾಲಕ್ಕಿ ಹಾರದ ತವರು ಹಾವೇರಿಯಲ್ಲೂ ನಿಲುಗಡೆ ಆರಂಭಿಸಲಾಗಿದೆ. ಹಾವೇರಿ- ಗದಗ ಸಂಸದರಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿರಂತರ ಒತ್ತಡದ ಪ್ರಯತ್ನವಾಗಿ ಹಾವೇರಿಯಲ್ಲಿ ನಿಲುಗಡೆ ಸೇವೆಯನ್ನು ಶುಕ್ರವಾರ ಆರಂಭಿಸಲಾಯಿತು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ರೈಲು ಸಂಖ್ಯೆ 20662 ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಮಾತನಾಡಿ, ನಾನು ಲೋಕಸಭೆಗೆ ಆಯ್ಕೆಯಾದ ಮೇಲೆ ಹಲವಾರು ರೈಲ್ವೆ ಯೋಜನೆಗಳ ಬಗ್ಗ...