Bangalore, ಮಾರ್ಚ್ 21 -- Indian Railways: ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಬೆಂಗಳೂರು ವಿಭಾಗವು ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಜಿಲ್ಲೆಯ ಸಂಪಿಗೆ ರೋಡ್ ಮತ್ತು ಬೆಂಗಳೂರು ನಗರದ ಮಲ್ಲೇಶ್ವರಂ ನಿಲ್ದಾಣಗಳಲ್ಲಿ ಕೆಲವು ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಿದೆ. ಈ ನಿಲುಗಡೆಗಳು 2025ರ ಏಪ್ರಿಲ್ 1ರಿಂದ ಜೂನ್ 30ರವರೆಗೆ ಮೂರು ತಿಂಗಳ ಅವಧಿಗೆ ಮುಂದುವರಿಯಲಿವೆ. ಈಗಾಗಲೇ ಮೂರು ಬಾರಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ. ಈ ಭಾಗದಲ್ಲಿ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿರುವ ಜತೆಗೆ ಬೇಡಿಕೆಯೂ ಇರುವುದರಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆ ತಾಳಗುಪ್ಪ ರೈಲಿನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

1. ರೈಲು ಸಂಖ್ಯೆ 16239/16240 ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್‌ ರೈಲು ಏಪ್ರಿಲ್ 1ರಿಂದ ಜೂನ್ 30ರವರೆಗೆ ಸಂಪಿಗೆ ರೋಡ...