Bangalore, ಏಪ್ರಿಲ್ 18 -- ಬೆಂಗಳೂರು: ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ಬೆಂಗಳೂರು ಹಾಗೂ ಮೈಸೂರು ವಿಭಾಗದಿಂದ ಹೊರಡುವ ಮೂರು ರೈಲುಗಳನ್ನು ಸೀಮಿತ ಅವಧಿಗೆ ಕೆಲವು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.ಬೆಂಗಳೂರು - ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಿಕೊಟ್ಟಿದ್ದರೆ, ವಿಜಯಪುರ ಜಿಲ್ಲೆಯ ಲಚ್ಯಾಣ ನಿಲ್ದಾಣದಲ್ಲಿ ಬಸವ ಮತ್ತು ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆ ಅವಕಾಶ ಕೊಡಲಾಗಿದೆ. ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ

ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು - ಹೊಸಪೇಟೆ - ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿ...