ಭಾರತ, ಫೆಬ್ರವರಿ 11 -- Indian Railways: ಬಹುದಿನಗಳ ಬೇಡಿಕೆಯಾದ ಬೆಳಗಾವಿಯಿಂದ ಬೆಂಗಳೂರುವರೆಗಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಬೆಳಿಗ್ಗೆ ರೈಲು ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಇದಲ್ಲದೇ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುತ್ತಿರುವ ವಂದೇಭಾರತ್‌ ರೈಲು ಸೇವೆಯನ್ನು ಬೆಳಗಾವಿವರೆಗೂ ವಿಸ್ತರಿಸುವ ಕುರಿತು ಚರ್ಚೆಗಳು ನಡೆದಿದ್ದು, ಸಾಧಕ ಬಾಧಕಗಳ ಚರ್ಚೆಗಳು ನಡೆದಿವೆ. ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಸಚಿವ ಪ್ರಲ್ಹಾದ ಜೋಶಿ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ...