Mysuru, ಫೆಬ್ರವರಿ 13 -- ಮೈಸೂರು: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಿ ಬರುವ ಮನಸ್ಸಿದೆಯೇ, ಅಲ್ಲಿ ಹೋಗಿ ಬರುವುದು ಹೇಗೆ ಎನ್ನುವ ಯೋಚನೆಯಿದೆಯೇ. ಹೀಗೆ ಹೋಗಿ ಬರಲು ಬಯಸುವವರಿಗೆ ಭಾರತೀಯ ರೈಲ್ವೆಯು ವಿಶೇಷ ರೈಲಗಳ ವ್ಯವಸ್ಥೆ ಮಾಡಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಮಾರ್ಗವಾಗಿ ಹೋಗುವ ಎರಡು ವಿಶೇಷ ರೈಲುಗಳು ಮೈಸೂರಿನಿಂದ ಸಂಚರಿಸಲಿವೆ. ಮೈಸೂರಿನಿಂದ ಬೆಂಗಳೂರು ದಾವಣಗೆರೆ ಹುಬ್ಬಳ್ಳಿ ಮಾರ್ಗವಾಗಿ ಲಕ್ನೋಗೆ ಹಾಗೂ ಮೈಸೂರಿನಿಂದ ತುಂಡ್ಲಾಗೆ ಇದೇ ಮಾರ್ಗದಲ್ಲಿ ವಿಶೇಷ ರೈಲು ಸಂಚರಿಸಲಿವೆ. ಈ ರೈಲಿನ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ...