Mysuru, ಏಪ್ರಿಲ್ 8 -- Indian Railways: ಭಾರತೀಯ ರೈಲ್ವೆ ನೈರುತ್ಯ ರೈಲ್ವೆ ಮೈಸೂರು ವಿಭಾಗದ ಹಬನಘಟ್ಟ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಕಾಲುವೆ ದಾಟುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ರೈಲು ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಅದರಲ್ಲೂ ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್, ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ ಪ್ರೆಸ್ , ಮೈಸೂರು-ಅರಸೀಕೆರೆ ಡೈಲಿ ಪ್ಯಾಸೆಂಜರ್, ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲುಗಳ ಸಂಚಾರದಲ್ಲಿ ಏಪ್ರಿಲ್‌ನಿಂದ ಆರಂಭಗೊಂಡು ಮುಂದಿನ ಎರಡು ತಿಂಗಳ ಕಾಲ ವ್ಯತ್ಯಯವಾಗಲಿದೆ. ಎರಡು ರೈಲುಗಳ ಸೇವೆಯೂ ತಾತ್ಕಾಲಿಕ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

1. , 2025 ರ ಏಪ್ರಿಲ್ 8, 10, 12, 14, 29, ಮೇ 3, 10 ಮತ್ತು ಜೂನ್ 10 ರಂದು ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದಾಗಲಿದೆ. ...