Bangalore, ಮಾರ್ಚ್ 8 -- Indian Railways: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರೊಟ್ಟಗೆ ಎಸ್ಎಂವಿಟಿ ಬೆಂಗಳೂರು-ಗೋರಖ್ಪುರ ನಿಲ್ದಾಣಗಳ ನಡುವೆ ಎರಡು ಟ್ರಿಪ್ಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ಅನುಮತಿ ನೀಡಲಾಗಿದೆ. ಇದಲ್ಲದೇ ಮೈಸೂರು ಮತ್ತು ಭಗತ್-ಕಿ-ಕೋಥಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ಗಳಿಗೆ ವಿಶೇಷ ರೈಲುಗಳು ಹೋಳಿ ವೇಳೆಯೇ ಓಡಲಿವೆ. ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ ನಿಲ್ದಾಣಗಳ ನಡುವೆಯೂ ವಿಶೇಷ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು...