ಭಾರತ, ಮಾರ್ಚ್ 3 -- ಹೆಣ್ಣೆಂದರೆ ಶಕ್ತಿ, ಹೆಣ್ಣಿದ್ದರೆ ಭವಿಷ್ಯ, ಹೆಣ್ಣು ಮನೆ-ಸಮಾಜದ ಬೆಳಕು. ಹೆಣ್ಣುಮಕ್ಕಳು ಇಂದು ಕಾಲಿಡದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುವ ಮೂಲಕ ತಾವು ಗಂಡಿಗೆ ಸಮಾನರು, ತಮ್ಮಲ್ಲೂ ಸಾಮರ್ಥ್ಯವಿದೆ ಎಂಬುದನ್ನು ನಿರೂಪಿಸಿ ಲಿಂಗ ಸಮಾನತೆಯ ತತ್ವವನ್ನು ಎತ್ತಿ ಹಿಡಿಯುತ್ತಿದ್ದಾರೆ. ಹೆಣ್ಣುಮಕ್ಕಳ ಸಾಧನೆಗಳನ್ನು ಗುರುತಿಸಿ, ಗೌರವಿಸುವ ಜೊತೆಗೆ ಮಹಿಳಾ ಸಮಾನತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆ ಯಾವಾಗ, ಈ ದಿನದ ಇತಿಹಾಸ, ಮಹತ್ವವೇನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರತಿವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಬಹಳ ವಿಶೇಷವಾಗಿ ಆಚರಿಸಲಾಗುತ್ತದೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ಮಹಿಳಾ ದಿನ 2023: ಪ್ರೀತಿಪಾತ್ರರಿಗೆ ಉಡುಗೊರೆ ಕೊಡುವ ಯೋಚನೆ ಇದೆಯೇ? ಈ ಉಡ...