ಭಾರತ, ಮಾರ್ಚ್ 20 -- ಐಪಿಎಲ್ 2025ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇನ್ನೇನು ಟೂರ್ನಿ ಆರಂಭಕ್ಕೆ ಎರಡು ದಿನಗಳು ಮಾತ್ರವೇ ಬಾಕಿ ಉಳಿದಿವೆ. ಮಾರ್ಚ್ 22ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (KKR vs RCB) ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 18ನೇ ಆವೃತ್ತಿಯ ಟೂರ್ನಿಗೆ ಅದ್ದೂರಿ ಚಾಲನೆ ಸಿಗಲಿದೆ. ಟೂರ್ನಿ ಆರಂಭಕ್ಕಿಂತ ಹಲವು ದಿನ ಮುಂಚಿತವಾಗಿ ಐಪಿಎಲ್ ಪಂದ್ಯಗಳ ಟಿಕೆಟ್‌ಗೆ ಭಾರಿ ಬೇಡಿಕೆ ಶುರುವಾಗಿದೆ. ಅಭಿಮಾನಿಗಳು ಕ್ರೀಡಾಂಗಣಕ್ಕೆ ತೆರಳಿ ಪಂದ್ಯ ವೀಕ್ಷಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ವರ್ಷ, ಆಯಾ ತಂಡಗಳ ಫ್ರಾಂಚೈಸಿಗಳು ತಮ್ಮ ತವರು ಆತಿಥ್ಯ ಸ್ಥಳಗಳಲ್ಲಿ ನಡೆಯುವ ಪಂದ್ಯಗಳ ಟಿಕೆಟ್‌ಗಳಿಗಾಗಿ ವಿವಿಧ ಅಧಿಕೃತ ಟಿಕೆಟಿಂಗ್ ಪಾಲುದಾರರೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂ...